ಜಿಲ್ಲೆ

ಅರ್ಹ ಸಂಸ್ಥೆಯಿಂದ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ ಶಿಶುಕೇಂದ್ರೀಕೃತ ಯೋಜನೆಯಡಿ ನಡೆಸುತ್ತಿರುವ ವಿಶೇಷ ಶಾಲೆಯನ್ನು ಅನುದಾನಕ್ಕೆ ಒಳಪಡಿಸಲು ಅರ್ಹ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸುವ ಸಂಸ್ಥೆಗಳು ಬೆಂಗಳೂರಿನ ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆಯಿಂದ ಅನುಮತಿ ಪಡೆದು, ಕಳೆದ 3 ವರ್ಷಗಳಿಂದ ಶಾಲೆ ನಡೆಸುತ್ತಿರಬೇಕು.

ಆಸಕ್ತ ಸಂಸ್ಥೆಯು ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲಾತಿಗಳೊಂದಿಗೆ ದ್ವಿ-ಪ್ರತಿಯಲ್ಲಿ ಫೆ.28ರೊಳಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಚೇರಿಗೆ ಸಲ್ಲಿಸಬಹುದು. ಮಾಹಿತಿಗೆ ದೂ.0816- 2270029 ಸಂಪರ್ಕಿಸಿ.