ಜಿಲ್ಲೆ

ತೋಟಗಾರಿಕೆ ಇಲಾಖೆ ಸೌಲಭ್ಯಕ್ಕೆ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಎಲ್ಲಾ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪ್ರಧಾನಮಂತ್ರಿ ಕೃಷಿ ಸಿಂಚಾಯಿ, ರಾಷ್ಟ್ರೀಯ ತೋಟಗಾರಿಕೆ ಮಿಷನ್, ರಾಷ್ಟ್ರೀಯ ಕೃಷಿ ವಿಕಾಸ, ಎಸ್‌ಎಂಎಎA ಯಾಂತ್ರೀಕರಣ, ತೆಂಗು ಅಭಿವೃದ್ಧಿ, ಸಮಗ್ರ ತೋಟಗಾರಿಕೆ ಅಭಿವೃದ್ಧಿ, ತೋಟಗಾರಿಕೆ ಬೆಳೆಗಳ ಕೀಟ ಮತ್ತು ರೋಗಗಳ ಸಮಗ್ರ ನಿಯಂತ್ರಣ, ಮಧುವನ ಮತ್ತು ಜೇನು ಸಾಕಾಣಿಕೆ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ(ನರೇಗಾ) ಯೋಜನೆಯಡಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು.

ಅಡಕೆ ಹೊರತುಪಡಿಸಿ ವಿವಿಧ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆಗಾಗಿ ಈ ಸಹಾಯಧನ ಪಡೆಯಬಹುದು. ವಿಕಲಚೇತನರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಹಾಗೂ ಅಲ್ಪ ಸಂಖ್ಯಾತ ಫಲಾನುಭವಿಗಳಿಗೆ ಆದ್ಯತೆ ಮೇರೆಗೆ ಸಹಾಯಧನ ವಿತರಿಸಲಾಗುವುದು.

ಆಸಕ್ತ ರೈತ ಫಲಾನುಭವಿಗಳು ತಾಲೂಕು ತೋಟಗಾರಿಕೆ ಇಲಾಖೆ ಕಚೇರಿ, ಹೋಬಳಿ ಮಟ್ಟದ ಸಹಾಯಕ ತೋಟಗಾರಿಕೆ ಅಧಿಕಾರಿಗಳಿಗೆ ಅರ್ಜಿ ಸಲ್ಲಿಸಿ ಪ್ರಯೋಜನ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕಾ ಅಧಿಕಾರಿ ಸಂಪರ್ಕಿಸಿ.