ತುಮಕೂರು: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಹ ವಿಶ್ವಕರ್ಮ ಸಮುದಾಯದವರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಅರಿವು-ಶೈಕ್ಷಣಿಕ ನೇರಸಾಲ(ಹೊಸದು), ಗಂಗಾಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ, ವಿದೇಶಿ ವ್ಯಾಸಂಗ ಹಾಗೂ ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಸಾಲ ಸೌಲಭ್ಯ ಪಡೆಯಲಿಚ್ಛಿಸುವವರು ಅರ್ಜಿಯನ್ನು ಆ.31ರೊಳಗಾಗಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ತುಮಕೂರು ಒನ್ ಸೇವಾ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಸ್ವಾತಂತ್ರ್ಯ ಅಮೃತ ಮಹೋತ್ಸವ ಯೋಜನೆಯ ಸೌಲಭ್ಯ ಪಡೆಯಲಿಚ್ಛಿಸುವವರು ಅರ್ಜಿಯನ್ನು ಜಾಲತಾಣ www.kaushalkar.com ನಲ್ಲಿ ಅರ್ಜಿ ಸಲ್ಲಿಸಬಹುದು.
ಮಾಹಿತಿಗೆ ನಿಗಮದ ವೆಬ್ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿ ದೂ.080 -22374848, ಮೊ.7899899039 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.0816-2005008 ಸಂಪರ್ಕಿಸಿ.