ಜಿಲ್ಲೆ

ಗಣನೀಯ ಸೇವೆಗಾಗಿ ಪ್ರಶಸ್ತಿಗೆ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್​.ಅಂಬೇಡ್ಕರ್​ ಜನ್ಮ ದಿನಾಚರಣೆ ಅಂಗವಾಗಿ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆ.27ರೊಳಗೆ ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.