ಜಿಲ್ಲೆ

ನಗರದಲ್ಲಿ ಏಕಬಳಕೆಯ ಪ್ಲಾಸ್ಟಿಕ್​ ನಿಷೇಧ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿರುವ ಪ್ಲಾಸ್ಟಿಕ್​ ತ್ಯಾಜ್ಯ ನಿರ್ವಹಣಾ ನಿಯಮಗಳ ಪ್ರಕಾರ 2022 ಜುಲೈ 1 ರಿಂದ ನಗರದಲ್ಲಿ ಏಕಬಳಕೆ ಪ್ಲಾಸ್ಟಿಕ್​ ಉತ್ಪಾದನೆ, ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ.

ನಿಯಮ ಉಲ್ಲಂಘನೆಯಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳು ಬರುತ್ತಿದ್ದು, ಪಾಲಿಕೆ ವ್ಯಾಪ್ತಿಯಲ್ಲಿ ಏಕಬಳಕೆ ಪ್ಲಾಸ್ಟಿಕ್​ ಉತ್ಪಾದನೆ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು.

ಪ್ಲಾಸ್ಟಿಕ್​ ತ್ಯಾಜ್ಯ ನಿರ್ವಹಣಾ ನಿಯಮಗಳನ್ವಯ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ವಸ್ತುಗಳ ಉತ್ಪಾದಕರು, ದಾಸ್ತಾನುದಾರರು, ಚಿಲ್ಲರೆ ವ್ಯಾಪಾರಿ, ಅಂಗಡಿ ಮಾಲೀಕರು, ಇ-ಕಾಮರ್ಸ್​ ಕಂಪನಿ, ಬೀದಿ ವ್ಯಾಪಾರಿ, ವಾಣಿಜ್ಯ ಸಂಸ್ಥೆ(ಮಾಲ್​, ಮಾರುಕಟ್ಟೆ ಸ್ಥಳ, ಶಾಪಿಂಗ್​ ಕೇಂದ್ರ) ಸಿನಿಮಾ ಮನೆ, ಪ್ರವಾಸೋದ್ಯಮ ಸ್ಥಳ, ಶಾಲೆ, ಕಾಲೇಜು, ಕಚೇರಿ ಸಂಕೀರ್ಣ, ಆಸ್ಪತ್ರೆ, ಇತರೆ ಸಂಸ್ಥೆಗಳು ಹಾಗೂ ಸಾರ್ವಜನಿಕರು ಏಕ ಬಳಕೆಯ ಪ್ಲಾಸ್ಟಿಕ್​ ಉತ್ಪಾದನೆ, ಆಮದು, ಸಂಗ್ರಹಣೆ, ವಿತರಣೆ, ಮಾರಾಟ, ಬಳಕೆ ಮಾಡುವುದನ್ನು ನಿಷೇಧಿಸಲಾಗಿದೆ.