ತುಮಕೂರು: ಕ್ಷೇತ್ರದ ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿ ಗಾಳಿ ಇದೆ. ಆ ಗಾಳಿ ದಿನದಿನಕ್ಕೂ ಬಿರುಗಾಳಿಯಾಗಿ ಬೀಸುತ್ತಿದೆ. ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗುವುದು ನಿಶ್ಚಿತ. ಮೋದಿಯವರಿಗೆ ಶಕ್ತಿ ತುಂಬಲು ಚುನಾವಣೆಯಲ್ಲಿ ನನ್ನನ್ನು ಆಶೀರ್ವದಿಸಿ. ಏ.26ರ ನಂತರ ಅಭಿವೃದ್ಧಿಯ ಹೊಸ ಶಕೆ ಆರಂಭವಾಗಲಿದೆ ಎಂದು ಎನ್‌ಡಿಎ ಅಭ್ಯರ್ಥಿ ವಿ.ಸೋಮಣ್ಣ ಹೇಳಿದರು.
ಕೊರಟಗೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ತುಮಕೂರು ತಾಲೂಕಿನ ಕೋರಾ ಹೋಬಳಿ ಕೆಸ್ತೂರಿನಲ್ಲಿ ಗುರುವಾರ ಬಿಜೆಪಿ-ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕೆಂಬ ಮಹಾದಾಸೆ ಎಲ್ಲರದ್ದಾಗಿದೆ. ಈ ಹಿನ್ನೆಲೆಯಲ್ಲಿ ನನ್ನನ್ನು ಬೆಂಬಲಿಸಿ ಎಂದರು.
ಜೆಡಿಎಸ್ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರೊಂದಿಗೆ ಅಣ್ಣತಮ್ಮಂದಿರಂತೆ ಸೇರಿ ಸೋಮಣ್ಣ ಗೆಲುವಿಗೆ ಕೆಲಸ ಮಾಡಬೇಕೆಂಬುದು ಮಾಜಿ ಸಿಎಂ ಕುಮಾರಸ್ವಾಮಿ ಸೂಚನೆ ಕೊಟ್ಟಿದ್ದರೆ. ಅವರ ಸೂಚನೆಯನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ ಎಂದು ಜೆಡಿಎಸ್ ಮಾಜಿ ಶಾಸಕ ಪಿ.ಆರ್.ಸುಧಾಕರಲಾಲ್ ಹೇಳಿದರು.
ಬಿಜೆಪಿಗೆ ಮತಹಾಕಿದರೆ ನಾಮರ್ದರು ಅಂತ ಪರಮೇಶ್ವರ್ ಜರಿಯುತ್ತಾರೆ. ಬೂತ್‌ಮಟ್ಟದಲ್ಲಿ ಇಳಿದು ಎಲ್ಲರೂ ಕೆಲಸ ಮಾಡಬೇಕಿದೆ. ಬಿಜೆಪಿ, ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹಾಲು, ಜೇನಿನಂತೆ ಒಗ್ಗೂಡಿ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಈ ಸಮನ್ವಯತೆ ಕಂಡಾಗ ಸೋಮಣ್ಣ ಎರಡು ಲಕ್ಷಗಳ ಮತಗಳ ಅಂತರದಿಂದ ಗೆಲ್ಲುವುದು ಖಚಿತ. ಬಿ.ಸುರೇಶ್‌ಗೌಡ ಗ್ರಾಮಾಂತರ ಶಾಸಕ