ತುಮಕೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಇಂದಿರಾ ಕ್ಯಾಂಟಿನ್ಗಳಲ್ಲಿ ಆಹಾರ ನೀಡುವ ಗುತ್ತಿಗೆದಾರರು ಊಟ ಮಾಡುವವರ ಸಂಖ್ಯೆಯ ಲೆಕ್ಕವನ್ನು ತಪ್ಪಾಗಿ ನೀಡಿ ಸುಳ್ಳು ಬಿಲ್ ಮಾಡಿಕೊಳ್ಳುವುದನ್ನು ತಡೆಯಲು ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಮ್ಖಾನ್ ಹೇಳಿದರು.
ತುಮಕೂರಿನಲ್ಲಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿ ಇಂದಿರಾ ಕ್ಯಾಂಟಿನ್ಗೆ ಭೇಟಿ ನೀಡಿ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ಗಳಲ್ಲಿ ಅವ್ಯವಹಾರ ನಡೆಸಲು ಇನ್ನು ಮುಂದೆ ಅವಕಾಶ ನೀಡುವುದಿಲ್ಲ, ಸುಳ್ಳು ಬಿಲ್ಲು ಸೃಷ್ಠಿಸುವುದನ್ನು ತಪ್ಪಿಸಲು ಎಲ್ಲಾ ಕಡೆಗಳಲ್ಲಿಯೂ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು ಎಂದರು.
ಎಲ್ಲೆಡೆಯೂ ಸ್ವಚ್ಛತೆ ಕಾಪಾಡಿಕೊಂಡು ಸಾರ್ವಜನಿಕರಿಗೆ ಶುಚಿ, ರುಚಿಯಾದ ಆಹಾರ ನೀಡುವಂತೆ ಸೂಚನೆ ನೀಡಲಾಗಿದೆ. ಎಲ್ಲಾ ಪಟ್ಟಣ, ನಗರಗಳಲ್ಲಿಯೂ ಇಂದಿರಾ ಕ್ಯಾಂಟೀನ್ಗಳಿಗೆ ಸಂಬಂಧಪಟ್ಟ ಹಿರಿಯ ಅಧಿಕಾರಿ ಆಗಾಗ್ಗೆ ಭೇಟಿ ನೀಡಿ ಪರಿಶೀಲಿಸುವಂತೆ ಸೂಚಿಸಲಾಗಿದೆ, ರ್ನಿಲಕ್ಷ$್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣಕ್ರಮ ಕೈಗೊಳ್ಳಲಾಗುವುದು ಎಂದರು ಎಚ್ಚರಿಕೆ ನೀಡಿದರು.