ಜಿಲ್ಲೆ

ಕರೊನಾ ಮಾರ್ಗಸೂಚಿ; ತುಮಕೂರಿನಲ್ಲಿ ರಾತ್ರಿ 1ರೊಳಗೆ ಹೊಸ ವರ್ಷಾಚರಣೆ ಮುಗಿಸಲು ಡಿಸಿ ಸೂಚನೆ

ತುಮಕೂರು: ಸರ್ಕಾರದ ಕರೊನಾ ಮಾರ್ಗಸೂಚಿ ಅನುಸಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಕ್ಯೆಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸಭೆಯಲ್ಲಿ ಸೂಚಿಸಿದರು.

ಹೊಸ ವರ್ಷದ ಆಚರಣೆಗಳು ರಾತ್ರಿ 1ರೊಳಗೆ ಅಂತ್ಯವಾಗಬೇಕು, ಜನ ಸೇರುವಂತಹ ಯಾವುದೇ ಆಚರಣೆಗಳು ನಡೆಯುವ ಸ್ಥಳಗಳಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಇರಬಾರದು, ಒಳಾಂಗಣ ಕಾರ್ಯಕ್ರಮಗಳಲ್ಲಿ ಮಾಸ್ಕ್ ಧರಿಸಬೇಕು, ದೈಹಿಕ ಅಂತರ ಪಾಲಿಸಲು ಸೂಚಿಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ಸೋಂಕಿತರಿಗೆ 100 ಬೆಡ್, ತಾಲೂಕು ಆಸ್ಪತ್ರೆಯಲ್ಲಿ 25 ಬೆಡ್ ಕಾಯ್ದಿರಿಸಬೇಕು, ಜಿಲ್ಲೆಯಲ್ಲಿ ಕರೊನಾ ಪರಿಸ್ಥಿತಿಯು ನಿಯಂತ್ರಣದಲ್ಲಿದೆ, ಆದಾಗ್ಯೂ ಸರ್ಕಾರದ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು, ಇದಕ್ಕಾಗಿ ಎಲ್ಲಾ ಅಗತ್ಯ ಸಿದ್ದತೆ ಮಾಡಿಕೊಳ್ಳಬೇಕು ಎಂದರು.

9 ರೂಪಾಂತರಗೊಂಡಿರುವ ವೈರಸ್‌ನ ತಡೆಗಟ್ಟುವ ನಿಟ್ಟಿನಲ್ಲಿ, ಸಾರ್ವಜನಿಕರು ಇನ್ನೂ ಹೆಚ್ಚಿನ ಮುಂಜಾಗ್ರತೆ ಹಾಗೂ ಸಾಮಾಜಿಕ ಜವಾಬ್ದಾರಿ ಪಾಲನೆ ಮಾಡಬೇಕಾದ ಅನಿವಾರ್ಯತೆಯಿದ್ದು ಸಾರ್ವಜನಿಕರ ಸ್ಥಳದಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು ಎಂದು ಮನವಿ ಮಾಡಿದ್ದಾರೆ.