ಜಿಲ್ಲೆ

31ರ ವರೆಗೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತ ಸಮುದಾಯದ ಕಾನೂನು ಪದವೀಧರರಿಗೆ ನೀಡಲಾಗುವ ವಕೀಲ ವೃತ್ತಿಯಲ್ಲಿ ತರಬೇತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್​ 31ರ ವರೆಗೆ ವಿಸ್ತರಿಸಿದೆ.

ಮುಸ್ಲಿಂ, ಕ್ರಿಶ್ಚಿಯನ್​, ಜೈನ್​, ಬೌದ್ಧ, ಸಿಖ್​ ಮತ್ತು ಪಾರ್ಸಿ ವರ್ಗಕ್ಕೆ ಸೇರಿದ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಂಪರ್ಕಿಸಿ.