ಜಿಲ್ಲೆ

ಭೂಸ್ವಾಧೀನ ಸಮಸ್ಯೆ ಪರಿಹಾರಕ್ಕಾಗಿ ಪ್ರತ್ಯೇಕ ಕೌಂಟರ್; ಜಿಲ್ಲಾಧಿಕಾರಿ ವಿಶೇಷ ಆಸಕ್ತಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಅನುಷ್ಟಾನಕ್ಕೆ ಭೂಸ್ವಾಧೀನ ಪ್ರಕ್ರಿಯೆಯ ವಿಳಂಬವೇ ಪ್ರಮುಖ ತೊಡಕಾಗಿರು ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಇಂತಹ ತೊಡಕಾಗದಂತೆ ಮುತುವರ್ಜಿ ತೋರಿಸಿದೆ.

ಭೂಸ್ವಾಧೀನಕ್ಕೆ ರೈತರಿಂದ ಅಹವಾಲು ಸ್ವೀಕರಿಸಲು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ವಿಶೇಷ ಭೂಸ್ವಾಧೀನ ಅಧಿಕಾರಿ ಸೋಮಪ್ಪ ಕಡಕೋಳ ಅವರ ನೇತೃತ್ವದಲ್ಲಿಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರತ್ಯೇಕ ಕೌಂಟರ್‌ಕೂಡ ಸ್ಥಾಪಿಸಲಾಗಿದೆ.

ಬೆಳ್ಳಾವಿ ಹೋಬಳಿ ಸೋರೆಕುಂಟೆ, ಪಿ.ಗೊಲ್ಲಹಳ್ಳಿ, ಪುರದಕುಂಟೆ, ಗೌಡನಹಳ್ಳಿ, ಲಿಂಗನಹಳ್ಳಿ, ಗಿರಿಯನಹಳ್ಳಿ ಸೇರಿದಂತೆ 6 ಗ್ರಾಮಗಳ ಸುಮಾರು 1722 ಎಕರೆ ವಿಸ್ತೀರ್ಣದಲ್ಲಿ ಚೆನ್ನೆÊ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆ ಅಭಿವೃದ್ಧಿಪಡಿಸಲಾಗುತ್ತಿದ್ದು ಜಿಲ್ಲಾಡಳಿತ ಭೂಸ್ವಾಧೀನಕ್ಕೆ ವಿಶೇಷ ಆಸಕ್ತಿವಹಿಸಿದೆ.

ಮಂಗಳವಾರ ಕೌಂಟರ್‌ನಲ್ಲಿ ಯಲ್ಲದಡ್ಲು ಗ್ರಾಮದ ಒಬ್ಬರು, ಸೋರೆಕುಂಟೆ 5, ಪುರದಕುಂಟೆ 1, ಗೌಡನಹಳ್ಳಿ 4 ರೈತರು ಸೇರಿ ಒಟ್ಟು 11 ರೈತರು ಖುದ್ದಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಲಿಖಿತ ಅರ್ಜಿ ಮೂಲಕ ಅಹವಾಲು ಸಲ್ಲಿಸಿದರು.

ಜಿಲ್ಲಾಧಿಕಾರಿ ಶುಭಕಲ್ಯಾಣ್ ಖುದ್ದು ಕೌಂಟರ್‌ಗೆ ಭೇಟಿ ನೀಡಿ ರೈತರಿಂದ ಸಲ್ಲಿಕೆಯಾಗುತ್ತಿರುವ ಅಹವಾಲು ಪರಿಶೀಲಿಸಿ ಆದಷ್ಟು ಬೇಗ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾಧಿಕಾರಿ ಶುಭಕಲ್ಯಾಣ್ ಮೇ.23ರಂದು ಸೋರೆಕುಂಟೆ ಗ್ರಾಮಕ್ಕೆ ಭೇಟಿ ಚೆನ್ನೆÊ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಯೋಜನೆ ವೀಕ್ಷಿಸಿದ್ದರು. ಈ ಸಂದರ್ಭದಲ್ಲಿ ಸದರಿ ಯೋಜನೆ ಅಭಿವೃದ್ಧಿಗಾಗಿ ಭೂಮಿ ನೀಡಿದ ಸ್ಥಳೀಯ ರೈತರು ಇದುವರೆಗೂ ಪರಿಹಾರ ದೊರೆತಿಲ್ಲ. ಶೀಘ್ರ ಭೂ ಪರಿಹಾರ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದರು.

ಭೂ ಪರಿಹಾರದಿಂದ ವಂಚಿತರಾಗಬಾರದೆAಬ ದೃಷ್ಟಿಯಿಂದ ರೈತರು ಖುದ್ದಾಗಿ ಭೇಟಿ ಮಾಡಿ ಲಿಖಿತ ಅಹವಾಲು ಸಲ್ಲಿಸಬೇಕು ಎಂದು ರೈತರಿಗೆ ನೀಡಿದ್ದ ಭರವಸೆಯಂತೆ ಪ್ರತ್ಯೇಕ ಕೌಂಟರ್ ಆರಂಭಿಸಿದ್ದಾರೆ.