ಜಿಲ್ಲೆ

ಡಿಪ್ಲೋಮಾ ಪ್ರವೇಶಕ್ಕಾಗಿ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ನಗರದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ 2024-25ನೇ ಸಾಲಿನ ಪ್ರಥಮ ಡಿಪ್ಲೋಮಾ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. ಅರ್ಜಿ ನಮೂನೆ ಹಾಗೂ ಮಾಹಿತಿ ಪುಸ್ತಕವನ್ನು ತಾಂತ್ರಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್

https://dtetech.karnataka.gov.in/kartechnical ಮೂಲಕ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಮೂಲ ದಾಖಲಾತಿಗಳೊಂದಿಗೆ ಮೇ.21ರ ಸಂಜೆ 5ರೊಳಗೆ ಸಲ್ಲಿಸಬಹುದು.

ಮಾಹಿತಿಗೆ ಮೊ.9448647636, 900816036, ದೂ.0816-2970104/ 2006134ನ್ನು ಸಂಪರ್ಕಿಸಿ.