ಜಿಲ್ಲೆ

ಸ್ಥಿರಾಸ್ಥಿಗಳ ಪರಿಷ್ಕೃತ ದರದ ಕರಡು ಪಟ್ಟಿ ಪ್ರಕಟ

ತುಮಕೂರು: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಆಯಾ ತಾಲೂಕು ವ್ಯಾಪ್ತಿಯ ಗ್ರಾಮಗಳ ಕೃಷಿ ಜಮೀನುಗಳಿಗೆ ಮತ್ತು ನಿವೇಶನಗಳಿಗೆ ಹಾಗೂ ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರಗಳ ಕರಡು ಪಟ್ಟಿಯನ್ನು ಮಾರುಕಟ್ಟೆ ಮೌಲ್ಯ ಮಾಪನ ಉಪ ಸಮಿತಿಯ ಸಭೆಯಲ್ಲಿ ಚರ್ಚಿಸಿ ಪ್ರಚುರಪಡಿಸಲಾಗಿದೆ.
ಪರಿಷ್ಕೃತ ಮಾರ್ಗಸೂಚಿ ಮೌಲ್ಯದ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪಣೆಗಳಿದ್ದಲ್ಲಿ 15 ದಿನಗಳೊಳಗಾಗಿ ಲಿಖಿತ ರೂಪದಲ್ಲಿ ಆಯಾ ತಾಲೂಕು ಉಪನೋಂದಣಾಧಿಕಾರಿಗೆ ಸಲ್ಲಿಸಬಹುದು.