ಜಿಲ್ಲೆ

ಕುಣಿಗಲ್ ಶಾಸಕ ಡಾ.ರಂಗನಾಥ್ ಗೆ ಪಿತೃವಿಯೋಗ

ಡಾ.ಶ್ರೀಹರ್ಷ ಸೋರಲಮಾವು

ಕುಣಿಗಲ್: ಶಾಸಕ ಡಾ.ಎಚ್.ಡಿ.ರಂಗನಾಥ್ ಅವರ ತಂದೆ ಡಾ.ಎಚ್.ಆರ್.ದೊಡ್ಡಯ್ಯ(92) ಅವರು ದೀರ್ಘಕಾಲದ ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು.

ಪತ್ನಿ ಲಕ್ಷ್ಮಮ್ಮ, ಪುತ್ರರಾದ ಶಾಸಕ ಡಾ.ಎಚ್.ಡಿ ರಂಗನಾಥ್, ಡಾ.ಎಚ್.ಡಿ.ರಾಮಚಂದ್ರಪ್ರಭು, ಎಚ್.ಡಿ.ಶ್ರೀನಿವಾಸ್ ಅವರನ್ನು ಅಗಲಿದ್ದಾರೆ.

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗದ ಆಲ್ಕೆರೆ ಹೊಸಹಳ್ಳಿಯ ಡಾ.ಎಚ್.ಆರ್.ದೊಡ್ಡಯ್ಯ ವೈದ್ಯರಾಗಿಯೂ ಸಾಕಷ್ಟು ಜನಪ್ರಿಯತೆಗಳಿಸಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೃತದೇಹದ ಅಂತ್ಯಕ್ರಿಯೆ ಕುಣಿಗಲ್ ತಾಲೂಕು ಆಲ್ಕೆರೆ ಹೊಸಹಳ್ಳಿಯಲ್ಲಿ ಮಂಗಳವಾರ ಮಧ್ಯಾಹ್ನ 2ಕ್ಕೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.