ಜಿಲ್ಲೆ

ಪಿಯು ಪಾಸಾದವರಿಗೆ ಬಾಲಭವನದಲ್ಲಿ ಉದ್ಯೋಗ; ಅರ್ಜಿ ಪಡೆಯಲು ಡಿ.26 ಕೊನೆಯ ದಿನ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ನಗರದ ಎಂ.ಜಿ.ರಸ್ತೆಯ ಜಿಲ್ಲಾ ಬಾಲಭವನದಲ್ಲಿ ಮಕ್ಕಳ ಕಾರ್ಯಕ್ರಮ ನಿರ್ವಹಿಸಲು ಕಚೇರಿ ಸಹಾಯಕ ಒಂದು ಹುದ್ದೆಗೆ ಮಾಸಿಕ ಗೌರವಧನದ ಆಧಾರದ ಮೇಲೆ ತಾತ್ಕಾಲಿಕವಾಗಿ ನೇರಗುತ್ತಿಗೆ ಮೂಲಕ ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ.

ಪಿಯು ತೇರ್ಗಡೆಯಾಗಿರುವ ಆಸಕ್ತರು ಡಿ.26ರೊಳಗೆ ಅರ್ಜಿ ಸಲ್ಲಿಸಬಹುದು. ಆಯ್ಕೆ ಸಮಿತಿಯ ಮೂಲಕ ಸಂದರ್ಶನ ಹಾಗೂ ಕಂಪ್ಯೂಟರ್ ಜ್ಞಾನ ಪರೀಕ್ಷೆ ನಡೆಸಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದು. ಮಾಹಿತಿಗೆ ನಗರದ ಎಂ.ಜಿ.ರಸ್ತೆಯಲ್ಲಿರುವ ಜಿಲ್ಲಾ ಬಾಲಭವನ ಕಚೇರಿ ಸಂಪರ್ಕಿಸಿ.