ತುಮಕೂರು: ಶಿರಾ ತಾಲೂಕು ಚಿಕ್ಕನಹಳ್ಳಿ ಸರ್ಕಾರಿ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿನ ದಾಖಲಾತಿ ಪ್ರಾರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು.
ಸಾಮಾನ್ಯ ವಿದ್ಯಾರ್ಥಿಗಳು ದ್ವೀತಿಯ ಪಿಯು ಪರೀೆಯಲ್ಲಿ ಕನಿಷ್ಟ ಶೇ.50 ಅಂಕ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ವಿಕಲಚೇತನ ವಿದ್ಯಾರ್ಥಿಗಳು ಕನಿಷ್ಟ ಶೇ.45ರಷ್ಟು ಅಂಕ ಗಳಿಸಿರಬೇಕು.
ವಿದ್ಯಾರ್ಥಿಗಳಿಗೆ ಡಿ.ಇಎಲ್.ಇಡಿ ತರಬೇತಿ ಪಡೆದ ನಂತರ 1 ರಿಂದ 5ನೇ ತರಗತಿ ಹಾಗೂ ಪದವೀದರ ವಿದ್ಯಾರ್ಥಿಗಳಿಗೆ 6 ರಿಂದ 8ನೇ ತರಗತಿವರೆಗೆ ಬೋಧನೆ ಮಾಡಲು ಅವಕಾಶವಿದೆ.
ಪರಿಶಿಷ್ಟಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಪ್ರವೇಶಾವಕಾಶವಿದ್ದು, ಸಾಮಾನ್ಯ ವಿದ್ಯಾರ್ಥಿಗಳಿಗೆ 3500 ರೂ. ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ 25000 ರೂ. ವಿದ್ಯಾರ್ಥಿವೇತನ ನೀಡಲಾಗುವುದು.
ಮಾಹಿತಿಗೆ ಮೊ.9741069414, 9741507942, 9980870260, 7760783653, 9880331083, 9480250487 ಸಂಪರ್ಕಿಸಿ.