ತುಮಕೂರು: ಸೇವೆ ಖಾಯಮಾತಿ ಮತ್ತು ಸೇವಾ ಭದ್ರತೆಗೆ ಆಗ್ರಹಿಸಿ ಪ್ರತಿಭಟನಾ ಧರಣಿ ನಡೆಸುತ್ತಿರುವ ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರು ಮಂಗಳವಾರ ಪೊರಕೆ ಹಿಡಿದು ಜಿಲ್ಲಾಧಿಕಾರಿ ಕಚೇರಿ ಸ್ವಚ್ಛಗೊಳಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ಮುಂದುವರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಳೆದ 20 ದಿನದಿಂದಲೂ ನಡೆಯುತ್ತಿರುವ ಧರಣಿಯಲ್ಲಿ ಭಾಗವಹಿಸಿದ್ದು ನೂತಾರು ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ಕೆ.ಎಚ್.ಧರ್ಮವೀರ ಮಾತನಾಡಿ, 20 ದಿನಗಳಿಂದ ಅತಿಥಿ ಉಪನ್ಯಾಸಕರು ರಾಜ್ಯಾದ್ಯಂತ ಬೀದಿಬದಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದರು ಸರ್ಕಾರ ಸ್ಪಂದಿಸದೆ, ವಿದ್ಯಾರ್ಥಿಗಳಿಗೂ ಅನ್ಯಾಯ ಮಾಡುತ್ತಿದೆ, ನಮ್ಮ ನ್ಯಾಯಯುತ ಧ್ವನಿಗೂ ಅನ್ಯಾಯವೆಸಗುತಿದೆ ಸರ್ಕಾರ ಕಚೇರಿಯ ಸ್ವಚ್ಛ ಮಾಡುವ ಮೂಲಕ ನಮ್ಮ ಬೇಡಿಕೆಯನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸುತ್ತಿz್ದೆÃವೆ ಎಂದರು.
ಅತಿಥಿ ಉಪನ್ಯಾಸಕರು ತರಗತಿ ಭಹಿಷ್ಕರಿಸಿರುವುದರಿಂದ ರಾಜ್ಯಾದ್ಯಂತ ಓದುತ್ತಿರುವ ಲಕ್ಷಾಂತರ ಮಕ್ಕಳಿಗೆ ಪಾಠಗಳು ನಡೆಯುತ್ತಿಲ್ಲ, ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿನ್ನಡೆಯಾಗುತ್ತಿದೆ, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿಉಪನ್ಯಾಸಕರ ಬೇರೆ ಉದ್ಯೋಗಗಳಿಗೂ ಹೋಗಲು ಸಾಧ್ಯವಾಗುತ್ತಿಲ, ಸರ್ಕಾರಿ ನೇಮಕಾತಿಗೆ ನಿಗದಿ ಪಡಿಸಿದ ವಯೋಮಿತಿ ಮೀರಿರುವುದರಿಂದ ಕಾಯಾಮಾತಿ ಮಾಡಬೇಕು ಎಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕಿ ಡಾ.ಜಾಲಜಾಕ್ಷಿ ಮಾತನಾಡಿ ಪಂಜಾಬ್, ತೆಲಂಗಾಣ, ತಮಿಳುನಾಡು, ದೆಹಲಿ, ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದು ಅದ ರೀತಿಯಲ್ಲಿ ನಮ್ಮ ರಾಜ್ಯದಲ್ಲಿಯೂ ಖಾಯಂ ಮಾಡಬೇಕು ಎಂದರು.
ಪ್ರತಿಭಟನೆಯಲ್ಲಿ ಅತಿಥಿ ಉಪನ್ಯಾಸಕರುಗಳಾದ ಕೆ.ಆರ್.ಅಂಭಿಕಾ, ಸವಿತ, ವಿನುತಾ, ಡಾ.ಶಿವಣ್ಣ ತಿಮ್ಮಲಾಪುರ, ಡಾ.ಎಂ.ಟಿ.ಮಲ್ಲಿಕಾರ್ಜನಯ್ಯ, ಶಂಕರ, ಗಿರೀಶ್ ಮತ್ತಿತರರು ಇದ್ದರು.