ತುಮಕೂರು: ರಾಜ್ಯ ಚುನಾವಣಾ ಆಯೋಗ ತುಮಕೂರು ಜಿಲ್ಲೆಯ ಗ್ರಾಮಪಂಚಾಯತಿ ತೆರವಾಗಿರುವ ಸ್ಥಾನಗಳಿಗೆ ಉಪಚುನಾವಣೆ ನಡೆಸಲಿರುವ ಹಿನ್ನೆಲೆಯಲ್ಲಿ ಜು.21 ಸಂಜೆ 5ರಿಂದ ಜು.23ರ ಸಂಜೆ 5ರ ವರೆಗೆ ಚುನಾವಣೆ ನಡೆಯುವ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.
ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿ ಚುನಾವಣೆ ನಡೆಯದಿದ್ದಲ್ಲಿ ಈ ಆದೇಶ ಅನ್ವಯವಾಗುವುದಿಲ್ಲ ಎಂದು ತಿಳಿಸಿದ್ದಾರೆ.