ಜಿಲ್ಲೆ

ಗೃಹಲಕ್ಷ್ಮಿ ಯೋಜನೆಗೆ ಜಿಲ್ಲೆಯಲ್ಲಿ ಮಾಸಿಕ 140ಕೋಟಿ ರೂ.!

ತುಮಕೂರು: ಜಿಲ್ಲೆಯಲ್ಲಿ 722523 ಪಡಿತರ ಚೀಟಿದಾರರಿದ್ದು, ಅಂತ್ಯೋದಯ, ಎಪಿಎಲ್, ಬಿಪಿಎಲ್ ಪಡಿತರ ಚೀಟಿ ಹೊಂದಿದ ಕುಟುಂಬದ ಯಜಮಾನಿ ಮಹಿಳೆಯರಿಗೆ ಮಾಸಿಕ 2000ರೂ.ನಂತೆ ಒಟ್ಟು 140ಕೋಟಿ ರೂ. ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಲಿದೆ.

ಬ್ಯಾಂಕ್‌ನಲ್ಲಿ ಇಕೆವೈಸಿ ಹಾಗೂ ಆಧಾರ್ ಲಿಂಕ್ ಆಗಿರುವ ಫಲಾನುಭವಿಗಳ ಬ್ಯಾಂಕ್ ಖಾತೆಗೆ 2 ಸಾವಿರ ರೂ. ಜಮೆಯಾಗಲಿದೆ.

ಕುಟುಂಬದ ಯಜಮಾನಿ ಮಹಿಳೆಯರಿಗೆ ನೋಂದಣಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಎಸ್‌ಎಂಎಸ್ ರವಾನಿಸುವ ಪ್ರಕ್ರಿಯೆ ಪ್ರಾರಂಭವಾಗಿದ್ದು, ನೋಂದಣಿ ಉಚಿತವಾಗಿದ್ದು, ಅರ್ಜಿ ಸಲ್ಲಿಸಲು ಯಾವುದೇ ಶುಲ್ಕ ಪಾವತಿಸುವಂತಿಲ್ಲ.