ಜಿಲ್ಲೆ

ಅರ್ಜಿ ಆಹ್ವಾನ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮ, ಬಾಲಗರ್ಭಿಣಿ, ಗಂಡಾಂತರ ಗರ್ಭಿಣಿ, ರಕ್ತಹಿನತೆ, ಕುಟುಂಬ ಕಲ್ಯಾಣ ವಿಧಾನ, ಸುರಕ್ಷಿತ ಗರ್ಭಪಾತ, ಭ್ರೂಣಲಿಂಗ ಪತ್ತೆ ಕಾಯ್ದೆ, ಆಯುಷ್ಮಾನ್​ ಭಾರತ್​ ಕಾರ್ಡ್​ ಹಾಗೂ ವಿವಿಧ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಿಗೆ ಬೀದಿ ನಾಟಕ ಪ್ರದರ್ಶನದ ಮೂಲಕ ಜಾಗೃತಿ ಮೂಡಿಸಲು ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಷ್ಟ್ರೀಯ ಸಂಗೀತ ಮತ್ತು ಡ್ರಾಮಾ ಡಿವಿಜನ್​, ಕನ್ನಡ ಮತ್ತು ಸಂಸತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ, ಜಿಲ್ಲಾ ನೋಂದಣಿ ಇಲಾಖೆಯಲ್ಲಿ ನೋಂದಣಿಯಾಗಿರುವ ಕಲಾ ತಂಡಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಡಿಎಚ್​ಒ ಕಚೇರಿಯ ಐಇಸಿ ವಿಭಾಗದಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್​ 23ರೊಳಗಾಗಿ ಸಲ್ಲಿಸಬಹುದು.