ಹುಳಿಯಾರು:ಹುಳಿಯರು ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ವಳಗೇರೆಹಳ್ಳಿ ಚಂದ್ರಶೇಖರ್ರಾವ್ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ನಿಧನರಾಗಿದ್ದಾರೆ.
ಹುಳಿಯಾರ್ನಿಂದ ಕೋಡಿಪಾಳ್ಯದ ಪೆಟ್ರೋಲ್ ಬಂಕ್ ಗೆ ಪೆಟ್ರೋಲ್ ಹಾಕಿಸಲು ದ್ವಿಚಕ್ರ ವಾಹನದಲ್ಲಿ ತೆರಳುತ್ತಿರುವಾಗ ಕೋಡಿಪಾಳ್ಯದಬಳಿ ಅಳವಡಿಸಿರುವ ರಸ್ತೆ ಹಂಪ್ ಎಗರಿ ಬಿದ್ದು ತಲೆಗೆ ತೀವ್ರ ಪೆಟ್ಟು ಬಿದ್ದು ರಕ್ತ ರಕ್ತಸ್ರಾವವಾಗಿ ಹುಳಿಯಾರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತುಮಕೂರಿಗೆ ತೆರಳುತ್ತಿರುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಮೃತರಿಗೆ ಪತ್ನಿ ಹಾಗೂ ಮಗ, ಮಗಳು ಇದ್ದಾರೆ.