ಜಿಲ್ಲೆ

ಚಿನ್ನೇನಹಳ್ಳಿ ರೋಗಿಯೊಬ್ಬರಿಗೆ ಕಾಲರಾ ಪತ್ತೆ

ಡಾ.ಶ್ರೀಹರ್ಷ ಸೋರಲಮಾವು

ಮಧುಗಿರಿ : ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ವಾಂತಿ ಬೇದಿಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರಿಗೆ ಕಾಲರಾ ಇರುವುದು ಪತ್ತೆಯಾಗಿದ್ದು ಆತಂಕ ಹೆಚ್ಚಿಸಿದೆ.

ಗ್ರಾಮದ ಕೃಷ್ಣಪ್ಪ(32) ಎಂಬುವವರು ವಾಂತಿ-ಬೇದಿಯಿಂದ ಅಸ್ವಸ್ಥ ಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಸ್ವಯಂ ಪ್ರೇರಿತವಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ದಾಬಸ್ ಪೇಟೆಯಲ್ಲಿ ಸಂಬಂಧಿಕರ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು.

ಆಸ್ಪತ್ರೆಯಲ್ಲಿದ್ದಾಗ ನಡೆಸಿದ್ದ ವೈದ್ಯಕೀಯ ಪರೀಕ್ಷೆಯ ವರದಿಯಲ್ಲಿ ಕಾಲರಾ ದೃಢವಾಗಿದ್ದು ಗ್ರಾಮದಲ್ಲಿ ಕಟ್ಟೆಚ್ಚರ ವಹಿಸಬೇಕಿದೆ.

ಕಾಲರಾ ಸಾಮಾನ್ಯವಾಗಿ ಕಲುಷಿತ ನೀರಿನಿಂದ ಹರಡುವ ಬ್ಯಾಕ್ಟೀರಿಯಾದ ಕಾಯಿಲೆಯಾಗಿದೆ. ಕ ತೀವ್ರ ಅತಿಸಾರ ಮತ್ತು ನಿರ್ಜಲೀಕರಣವನ್ನು ಉಂಟುಮಾಡುತ್ತದೆ.

ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಶಿತ ನೀರು ಕುಡಿದು ಸುಮಾರು 200 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿದ್ದು, 6 ಜನ ಮೃತಪಟ್ಟಿದ್ದಾರೆ.

ಈಗ ಗ್ರಾಮದಲ್ಲಿ ಕಲುಶಿತ ನೀರು ಕುಡಿದು ಕಾಲರಾ ಕಾಣಿಸಿಕೊಂಡ ಮೊದಲ ಪ್ರಕರಣವಾಗಿದ್ದು, ಗ್ರಾಮದ ವ್ಯಕ್ತಿಯೊಬ್ಬರಲ್ಲಿ ಕಾಲರಾ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.