ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ(ಕೆಎಸ್ಓಯು) 2025-&26ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯಗಳ ದೂರ ಶಿಕ್ಷಣದ ಪದವಿ ಮತ್ತು ಸಾಂಪ್ರದಾಯಿಕ ವಿ.ವಿ.ಗಳು ನೀಡುವ ಶಿಕ್ಷಣ ಕ್ರಮಗಳ ಪದವಿಗೆ ಸಮಾನವಾಗಿರುತ್ತದೆ. ಕರ್ನಾಟಕ ರಾಜ್ಯ ಮುಕ್ತ ವಿವಿ ವಿದ್ಯಾರ್ಥಿಗಳ ಮನೆ ಬಾಗಿಲಿಗೆ ಉನ್ನತ ಶಿಕ್ಷಣ ನೀಡಲು ಪ್ರಯತ್ನಿಸುತ್ತಿದ್ದು, 10+2(ಪದವಿ ಪೂರ್ವ) ಹಾಗೂ 10+2+3(ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಪದವಿ ಪಡೆಯಬಹುದು.