ಜಿಲ್ಲೆ

ರಸ್ತೆಯಲ್ಲಿ ಪಲ್ಟಿಯಾದ ಲಾರಿ, ಚಲ್ಲಾಪಿಲ್ಲಿಯಾಗಿ ಬಿದ್ದ ಕಾಟನ್ ರಟ್ಟು

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ರಸ್ತೆಯಲ್ಲಿ ಚಲಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ನಗರದ ಕುಣಿಗಲ್ ರಸ್ತೆಯ ರಿಂಗ್ ರಸ್ತೆ ವಾಲ್ಮೀಕಿ ವೃತ್ತದಲ್ಲಿ ನಡೆದಿದೆ.

ಶುಕ್ರವಾರ ಬೆಳಗ್ಗೆ ಅತಿ ವೇಗವಾಗಿ ಬಂದಿರುವ ಲಾರಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬೆAಗಳೂರು ಕಡೆಯಿಂದ ತಿಪಟೂರು ಕಡೆಗೆ ಕಾಟನ್ ರಟ್ಟು ತುಂಬಿಕೊAಡು ಚಲಿಸುತ್ತಿದ್ದ ಲಾರಿ ಉರುಳಿದ ಬಿದ್ದಿದ್ದರಿಂದ ಕಾಟನ್ ರೊಟ್ಟುಗಳನ್ನು ರಿಂಗ್ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಲಾರಿ ರಿಂಗ್ ರಸ್ತೆಯಲ್ಲಿ ಉರುಳಿ ಬಿದ್ದಿದ್ದರಿಂದ ಕೆಲಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ರಸ್ತೆಯಲ್ಲಿ ಬಿದ್ದಿದ್ದ ಲಾರಿಯನ್ನು ಕ್ರೇನ್ ಸಹಾಯದಿಂದ ಮೇಲಕ್ಕೆತ್ತಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.