ಜಿಲ್ಲೆ

ತುರ್ತು ಸೇವೆಯ ಸಿಬ್ಬಂದಿಗೆ ರಜೆ ರದ್ದು!

ತುಮಕೂರು: ಜಿಲ್ಲೆಯಲ್ಲಿ ತುರ್ತು ಸೇವೆ ಒದಗಿಸುವ ಪೊಲೀಸ್​, ಅಗ್ನಿಶಾಮಕದಳ, ಬೆಸ್ಕಾಂ, ಆರೋಗ್ಯ ಇಲಾಖೆಗಳಲ್ಲಿ ಮಾನವ ಸಂಪನ್ಮೂಲ ಹಾಗೂ ಮೂಲಭೂತ ಸೌಕರ್ಯಗಳನ್ನು ಸಿದ್ಧವಿಟ್ಟುಕೊಳ್ಳಲು ಸರ್ಕಾರ ನಿರ್ದೆಶನ ನೀಡಿರುವ ಹಿನ್ನೆಲೆಯಲ್ಲಿ ರಜೆ ಮೇಲೆ ತೆರಳಿರುವ ತುರ್ತು ಸೇವೆ ನೀಡುವ ಇಲಾಖೆಗಳ ಅಧಿಕಾರಿ, ನೌಕರರ ರಜೆ ರದ್ದುಪಡಿಸಿ, ಮರಳಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ.

ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ 9000 ಹಾಸಿಗೆಗಳು ಲಭ್ಯವಿದ್ದು, 12 ಆಕ್ಸಿಜನ್​ ಪ್ಲಾಂಟ್​, ವೆಂಟಿಲೇಟರ್​, ಆಂಬುಲೆನ್ಸ್​ಗಳು ಸುಸ್ಥಿತಿಯಲ್ಲಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.