ತುಮಕೂರು: ಅಕ್ರಮ ಆಸ್ತಿಗಳಿಕೆ ಆರೋಪದ ಮೇಲೆ ತುಮಕೂರು ಅಭಿವೃದ್ಧಿ ಪ್ರಾಧಿಕಾರದ ಜಂಟಿ ನಿರ್ದೇಶಕ ನಾಗರಾಜು ಮನೆಯ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಗ್ಗೆ ತುಮಕೂರು ಸಪ್ತಗಿರಿ ಬಡಾವಣೆಯಲ್ಲಿರುವ ನಿವಾಸ ಹಾಗೂ ಪಾವಗಡ ತಾಲೂಕು ಅರಸೀಕೆರೆಯ ನಿವಾಸ ಹಾಗೂ ಟೂಡಾ ಕಚೇರಿಯಲ್ಲಿ ಮೂರು ಪ್ರತ್ಯೇಕ ತಂಡಗಳು ಏಕಕಾಲದಲ್ಲಿ ದಾಳಿ ನಡೆಸಲಾಗಿದ್ದು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎನ್ನಲಾಗಿದೆ.
ಕಳೆದ 18ತಿಂಗಳಿನಿAದ ಟೂಡಾ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನಾಗರಾಜು ಅಕ್ರಮ ಆಸ್ತಿ ಸಂಪಾದಿಸಿರುವ ದೂರು ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.