ಜಿಲ್ಲೆ

ಉದ್ಯೋಗ ಬಯಸುವ ಯುವ ಜನರಿಗೆ ಅವಕಾಶ; 13ರಂದು ತುಮಕೂರಿನಲ್ಲಿ ಮಿನಿ ಉದ್ಯೋಗ ಮೇಳ

ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ತುಮಕೂರಿನ ಮಾದರಿ ವೃತ್ತಿ ಕೇಂದ್ರದ ವತಿಯಿಂದ ಡಿ.13ರಂದು ಮಿನಿ ಉದ್ಯೋಗ ಮೇಳ ನಡೆಯಲಿದೆ.

ಉದ್ಯೋಗ ಮೇಳಕ್ಕೆ ತುಮಕೂರಿನ ಕಂಪನಿಗಳು ಭಾಗವಹಿಸುತ್ತಿದ್ದು, ಎಸ್ಸೆಸ್ಸೆಲ್ಸಿ, ಪಿಯು, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಾಸಾದ ಅಭ್ಯರ್ಥಿಗಳು ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತ 18 ರಿಂದ 35 ವರ್ಷದ ಒಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ. ಘೆಇಖ (ಡಿಡಿಡಿ.್ಞö್ಚo.ಜಟq.ಜ್ಞಿ ) ಪೋರ್ಟಲ್‌ನಲ್ಲಿ ಉದ್ಯೋಗಾಕಾಂಕ್ಷಿ ಆಗಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.

ಅರ್ಹ ಅಭ್ಯರ್ಥಿಗಳು ಡಿ.13ರಂದು ಬೆಳಗ್ಗೆ 10ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬಯೋಡೇಟಾ ಹಾಗೂ ಗುರುತಿನ ಚೀಟಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಮಾಹಿತಿಗೆ ದೂ.0816 2278488 ಸಂಪರ್ಕಿಸಿ.