ಜಿಲ್ಲೆ

11ರಂದು ಮಿನಿ ಮ್ಯಾರಥಾನ್

ತುಮಕೂರು: ದಸರಾ ಉತ್ಸವ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ್ಅ ಕ್ಟೋಬರ್ 11ರಂದು ಬೆಳಗ್ಗೆ 6.30ಕ್ಕೆ ತುಮಕೂರಿನಲ್ಲಿ ಮಿನಿ ಮ್ಯಾರಥಾನ್ ಆಯೋಜಿಸಲಾಗಿದೆ.


ಮ್ಯಾರಥಾನ್‌ನಲ್ಲಿ ಎಲ್ಲ ವಯೋಮಾನದವರು ಪಾಲ್ಗೊಳ್ಳಬಹುದಾಗಿದ್ದೆದು . ನಗರದ ಮಹಾತ್ಮಗಾಂಧಿ ಕ್ರೀಡಾಂಗಣದಿಂದ ಪ್ರಾರಂಭವಾಗಿ ಡಾ.ಶಿವಕುಮಾರಸ್ವಾಮೀಜಿ ವೃತ್ತ, ಎಸ್‌ಐಟಿ ಕಾಲೇಜು, ಗಂಗೋತ್ರಿ ರಸ್ತೆ, ಎಸ್‌ಎಸ್‌ಪುರಂ ಮುಖ್ಯರಸ್ತೆ, ಭದ್ರಮ್ಮ ಛತ್ರ, ಬಿ.ಜಿ.ಎಸ್. ಸರ್ಕಲ್, ಕಾಲ್‌ಟ್ಯಾಕ್ಸ್, ಗುಬ್ಬಿ ಗೇಟ್, ದಿಬ್ಬೂರು ಕ್ರಾಸ್, ಡಬಲ್ ರೋಡ್, ಅಮಾನಿಕೆರೆ ರಸ್ತೆ, ಡಿಸಿ ಕಚೇರಿ ರಸ್ತೆ, ಕೋತಿ ತೋಪು ವೃತ್ತ, ತಮ್ಮಯ್ಯ ಹಾಸ್ಪಿಟಲ್ ವೃತ್ತದ ಮೂಲಕ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಕೊನೆಗೊಳ್ಳಲಿದೆ.


ಮ್ಯಾರಥಾನ್‌ನಲ್ಲಿ ಪಾಲ್ಗೊಂಡ ವಿಜೇತ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ನಗದು ಬಹುಮಾನ ನೀಡಲಾಗುವುದು. ನಿಗಧಿತ ಮಾರ್ಗ ತಲುಪಿದ ಮೊದಲ 6 ಪುರುಷ ಹಾಗೂ 6 ಮಹಿಳಾ ವಿಜೇತರಿಗೆ ಪ್ರಥಮ, ದ್ವಿತೀಯ, ತೃತೀಯ, ನಾಲ್ಕು, ಐದು ಹಾಗೂ ಆರನೇ ನಗದು ಬಹುಮಾನದೊಂದಿಗೆ ಪಾರಿತೋಷಕ ನೀಡಲಾಗುವುದು. ಮ್ಯಾರಥಾನ್‌ನಲ್ಲಿ ಪಾಲ್ಗೊಂಡ ಎಲ್ಲರಿಗೂ ಇ-ಪ್ರಮಾಣಪತ್ರ ಹಾಗು ಟೀ-ಷರ್ಟ್, ಕ್ಯಾಪ್‌ಗಳನ್ನು ವಿತರಿಸಲಾಗುತ್ವುತಿದೆ.

ಮ್ಯಾರಥಾನ್​ ನಲ್ಲಿ ಭಾಗವಹಿಸಲು ಬಯಸುವವರು https://docs.google.com/forms/d/e/1FAIpQLScTMQqYtA7Ic5ZBosDqjJ1C2puCW362atfEQSWIn0oNMsE81A/viewform?pli=1 ಸಂಪರ್ಕಿಸಿ.