ತುಮಕೂರು: ರುಡ್ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರು ಅರ್ಜಿ ಸಲ್ಲಿಸಬಹುದು.
ತರಬೇತಿ ಏ.17ರಿಂದ ಪ್ರಾರಂಭವಾಗಲಿದ್ದು, ವಸತಿಯುತವಾಗಿದೆ. ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.9740982585, 9113880324 ಸಂಪರ್ಕಿಸಿ.