ಜಿಲ್ಲೆ

ತುಮಕೂರು ಮಹಾನಗರ ಪಾಲಿಕೆಯಲ್ಲಿ ಉದ್ಯೋಗಕ್ಕೆ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಮಹಾನಗರ ಪಾಲಿಕೆಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಎರಡು ಹುದ್ದೆಗೆ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಾನಗರ ಪಾಲಿಕೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ಡೇ-ನಲ್ಮ್ ಯೋಜನೆಯ ಉಪಘಟಕವಾದ ಸಾಮಾಜಿಕ ಕ್ರೊಢಿಕರಣ ಮತ್ತು ಸಾಂಸ್ಥಿಕ ಅಭಿವೃದ್ದಿ ಕಾರ್ಯಕ್ರಮದ ಸ್ವ-ಸಹಾಯ ಗುಂಪುಗಳು ಘಟಕದಡಿ ಸದಸ್ಯತ್ವ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ದ್ವಿತೀಯ ಪಿಯು ವಿದ್ಯಾರ್ಹತೆ ಹೊಂದಿರಬೇಕು, ಕಂಪ್ಯೂಟರ್ ಬಳಕೆ ಹಾಗೂ ಸ್ವ ಸಹಾಯ ಸಂಘದಿಂದ ಸದಸ್ಯತ್ವ ಹೊಂದಿರಬೇಕು.

ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಡಿ.12ರೊಳಗೆ ಆಯುಕ್ತರು, ತುಮಕೂರು ಮಹಾನಗರಪಾಲಿಕೆ, ತುಮಕೂರು. ಇವರಿಗೆ ಸಲ್ಲಿಸಬಹುದು.