ಜಿಲ್ಲೆ

ಗೌರ್ನರ್​ ಗೆ ಬೆದರಿಗೆ ಸರ್ಕಾರದ ಗಮನಕ್ಕಿಲ್ಲ; ಗೃಹ ಸಚಿವ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಂತ್​ಕಲ್​ ಮೈನಿಂಗ್​ ವಿಚಾರದಲ್ಲಿ ಸಹಿ ಫೋರ್ಜರಿಯಾಗಿದೆ ಎಂದು ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಈ ಬಗ್ಗೆ ದೂರು ಕೊಟ್ಟರೆ ಪರಿಶೀಲಿಸಿ, ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಬುಧವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ರಾಜ್ಯ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ, ಕಾನೂನು ಮೀರಿ ಏನನ್ನು ಮಾಡಿಲ್ಲ ಆದರೆ, ವಿರೋಧಪಕ್ಷದವರು ರಾಜ್ಯಪಾಲರ ಕಚೇರಿ ದುರುಪಯೋಗ ಪಡಿಸಿಕೊಂಡಿದ್ದಾರೆ. ಆ ಮೂಲಕ ಬಹುಮತವಿರುವ ಸರ್ಕಾರವನ್ನು ಅಸ್ಥಿರಗೊಳಿಸಿ ಅಧಿಕಾರಕ್ಕೇರುವ ಕನಸು ಕಾಣುತ್ತಿದ್ದಾರೆ ಎಂದರು.

ರಾಜ್ಯಪಾಲರಿಗೆ ಬೆದರಿಕೆ ಇದೆ ಎಂಬುದರ ಕುರಿತು ನನಗಾಗಲಿ ಅಥವಾ ಡಿಜಿಪಿ ಅವರ ಗಮನಕ್ಕಾಗಲಿ ಬಂದಿಲ್ಲ. ರಾಜ್ಯಪಾಲರಿಗೆ ಬುಲೆಟ್​ ಪ್ರೂಫ್​ ಕಾರು ಕೊಟ್ಟಿರುವ ಬಗ್ಗೆ ಹೆಚ್ಚಿನ ಮಾಹಿತಿ ಗೊತ್ತಿಲ್ಲ. ಕೇಂದ್ರದ ಭದ್ರತಾ ವ್ಯವಸ್ಥೆ ಪ್ರಕಾರ ನೀಡಿರಬಹುದು ಎಂದು ಸ್ಪಷ್ಟಪಡಿಸಿದರು.

ಕಾನೂನಿಗಿಂತ ಯಾರು ದೊಡ್ಡವರಿಲ್ಲ, ಕಾನೂನಿಗೆ ಗೌರವ ಕೊಡುತ್ತಿರುವುದರಿಂದಲೇ ಇನ್ನು ನಾವೆಲ್ಲ ಇದ್ದೇವೆ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾನೂನಿಗೆ ಗೌರವ ನೀಡಬೇಕು ಎಂದರು.