ಜಿಲ್ಲೆ

ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಉದ್ಘಾಟನೆಗೆ ಮೀನಾಮೇಷ!

ತುಮಕೂರು: ಇನ್ನೂ ನಿರ್ಮಾಣ ಹಂತದಲ್ಲಿಯೇ ಇರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಉದ್ಘಾಟನೆಗೆ ಜಿಲ್ಲಾಡಳಿತ ಮೀನಾಮೇಷ ಎಣಿಸುತ್ತಲೇ ಇದೆ. ಈ ಬಗ್ಗೆ ಸೋಮವಾರ ಬೆಳಗ್ಗೆ ನಿರ್ಧರಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ, ಬಸ್ ನಿಲ್ದಾಣ ಕಾಮಗಾರಿ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲವಾದ್ದರಿಂದ ವೇದಿಕೆಯಲ್ಲಿಯೇ ನಿಲ್ದಾಣ ಉದ್ಘಾಟಿಸುವ ಬಗ್ಗೆಯೂ ಚಿಂತನೆಯಿದೆ ಎಂದರು.

ರಾಜ್ಯಪಾಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂಬ ಕಾರಣಕ್ಕೆ ತುಮಕೂರು ವಿವಿ ಹೊಸ ಕ್ಯಾಂಪಸ್ `ಜ್ಞಾನಸಿರಿ' ಉದ್ಘಾಟನೆಯನ್ನು ಮುಂದೂಡಲಾಗಿದೆ ಎಂದರು.