ತುಮಕೂರು: ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ.ಮುದ್ದಹನುಮೇಗೌಡ ಚುನಾವಣಾ ಪ್ರಚಾರ ತಂತ್ರದ ಭಾಗವಾಗಿ ಅಹಿಂದ ಸಂಘಟನೆ, ಸಮುದಾಯಗಳ ಮುಖಂಡರೊAದಿಗೆ ಭೇಟಿ ನಡೆಸುತ್ತಿರುವುದು ಕುತೂಹಲ ಮೂಡಿಸಿದೆ.
ಶನಿವಾರ ತುಮಕೂರಿನಲ್ಲಿ ಕುರುಬ ಸಮುದಾಯದ ಮುಖಂಡರೊAದಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಅವರೊಂದಿಗೆ ಭಾಗವಹಿಸಿ ಚುನಾವಣೆಯಲ್ಲಿ ಬೆಂಬಲ ಕೋರಿದರು.
ಹಿಂದುಳಿದ ವರ್ಗದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರುವುದು ಮತ್ತು ಅವರ ಜನಪರ ಆಡಳಿತ ವೈಖರಿಯನ್ನು ಬಹುತೇಕರಿಗೆ ಸಹಿಸಲಾಗುತ್ತಿಲ್ಲ ಹಾಗಾಗಿ, ಇದೇ ಬಿಜೆಪಿ ವಿ.ಸೋಮಣ್ಣ ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಫರ್ಧಿಸಿ, ಅನಾವಶ್ಯಕ ಟೀಕೆ ಮಾಡಿದ್ದರು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹರಿಹಾಯ್ದರು.
ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವದ ಬಗ್ಗೆ ದೆಹಲಿಗೆ ಸಂದೇಶ ಕೊಡಬೇಕೆಂದರೆ ರಾಜ್ಯದಿಂದ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿ ಕಳುಹಿಸಬೇಕು. ತುಮಕೂರಿನಿಂದ ಮುದ್ದಹನುಮೇಗೌಡ ಅವರನ್ನು ಗೆಲ್ಲಿಸಿಕೊಟ್ಟು ನಮ್ಮೆಲ್ಲರ ಗೌರವ ಉಳಿಸಬೇಕು ಎಂದು ಮನವಿ ಮಾಡಿದರು.
ಶಾಸಕ ಎಸ್.ಆರ್.ಶ್ರೀನಿವಾಸ್, ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯP್ಷÀ ರಾಮಚಂದ್ರಪ್ಪ, ಮಾಜಿ ಶಾಸಕ ಡಾ.ರಫೀಕ್‌ಅಹ್ಮದ್, ಮುರಳಿಧರ ಹಾಲಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಆರ್.ರಾಮಕೃಷ್ಣ, ಮುಖಂಡರಾದ ಎಸ್.ನಾಗಣ್ಣ, ನಿಕೇತ್‌ರಾಜ್, ಕುರುಬ ಸಂಘದ ಸುರೇಶ್ ಮತ್ತಿತರರು ಇದ್ದರು.