ತುಮಕೂರು: ದಿ ಕರ್ನಾಟಕ ಟುಟೋರಿಯಲ್ ಇನ್ಸಿಟ್ಯೂಷನ್ಸ್ ನಿಯಮಾವಳಿಯನ್ವಯ ಪ್ರಥಮ ಹಾಗೂ ದ್ವೀತಿಯ ಪಿಯು ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಖಾಸಗಿಯಾಗಿ ಟುಟೋರಿಯಲ್ಗಳನ್ನು ನಡೆಸುವವರು ಕಡ್ಡಾಯವಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಅನುಮತಿ ಪಡೆಯತಕ್ಕದ್ದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಬಾಲಗುರುಮೂರ್ತಿ ತಿಳಿಸಿದ್ದಾರೆ.
ಅನುಮತಿ ಪಡೆಯದೆ ಟುಟೋರಿಯಲ್ಗಳನ್ನು ನಡೆಸುವ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಗಳ ಮೇಲೆ ಕಾನೂನು ಕ್ರಮವನ್ನು ಜರುಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ನಗರದ ಟೌನ್ಹಾಲ್ ವೃತ್ತದ ಬಳಿ ಜಿಲ್ಲಾ ಕೇಂದ್ರ ಗ್ರಂಥಾಲಯ ಆವರಣದಲ್ಲಿರುವ ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಪನಿರ್ದೇಶಕರ ಕಚೇರಿ ಸಂಪರ್ಕಿಸಿ ಎಂದು ಮನವಿ ಮಾಡಿದ್ದಾರೆ.