ಜಿಲ್ಲೆ

ಜಿಲ್ಲೆಯಲ್ಲಿ ಶೀಘ್ರದಲ್ಲಿಯೇ ಇಂಡಸ್ಟ್ರಿಯಲ್ ಕಾನ್ ಕ್ಲೇವ್ ಆಯೋಜನೆ; 2000 ಉದ್ಯೋಗ ಸೃಷ್ಠಿಯ ಗುರಿ

ತುಮಕೂರು: ನೆರೆಯ 17 ಜಿಲ್ಲೆಗಳಿಗೂ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ತುಮಕೂರು ಹೆಬ್ಬಾಗಿಲಾಗಿದ್ದು, ಕೈಗಾರಿಕಾ ಕ್ಷೇತ್ರದಲ್ಲಿ ತ್ವರಿತಗತಿಯಲ್ಲಿ ಅಭಿವೃದ್ಧಿ ಹೊಂದುತ್ತಿದೆ. ಈ ನಿಟ್ಟಿನಲ್ಲಿ ಸಧ್ಯದಲ್ಲೇ ಇಂಡಸ್ಟಿçಯಲ್ ಕಾನ್‌ಕ್ಲೇವ್ ಆಯೋಜಿಸಿ ಪ್ರಮುಖ ಕಂಪನಿಗಳ ಮುಖ್ಯಸ್ಥರನ್ನು ಆಹ್ವಾನಿಸಿ ಸನ್ಮಾನಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.

ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರಣಿ ಸಭೆ ನಡೆಸಿದ್ದು, ಶೀಘ್ರದಲ್ಲಿಯೇ ಆಯೋಜನೆಯಾಗಲಿರುವ ಉದ್ಯೋಗ ಮೇಳದಲ್ಲಿ ಜಿಲ್ಲೆಯ 2000 ಅಭ್ಯರ್ಥಿಗಳಿಗೆ ಉದ್ಯೋಗ ನೀಡಲು ಕೈಗಾರಿಕೋದ್ಯಮಿಗಳೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಭೆಯಲ್ಲಿ ಜಿಪಂ ಸಿಇಒ ಜಿ. ಪ್ರಭು, ಮಹಾನಗರಪಾಲಿಕೆ ಆಯುಕ್ತೆ ಅಶ್ವಿಜ, ಕೈಗಾರಿಕಾ ಜಂಟಿ ನಿರ್ದೇಶಕ ಲಿಂಗರಾಜು, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಮತ್ತಿತರರು ಇದ್ದರು.