ಜಿಲ್ಲೆ

ಪರೀಕ್ಷಾ ಕೇಂದ್ರದ 200ಮೀ ನಿಷೇಧಿತ ಪ್ರದೇಶ; ಜಿಲ್ಲಾಧಿಕಾರಿ ಆದೇಶ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ಜೂ.24 ರಿಂದ ಜುಲೈ 5ರ ವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆ-3ನ್ನು ಯಾವುದೇ ಲೋಪದೋ಼ಷವಿಲ್ಲದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಶುಭಕಲ್ಯಾಣ್ ಆದೇಶ ಹೊರಡಿಸಿದ್ದಾರೆ.

ಜೂ.24 ರಿಂದ ಜುಲೈ 5ರ ವರೆಗೆ ಬೆಳಗ್ಗೆ 9 ರಿಂದ ಸಂಜೆ 5.30ರ ವರೆಗೂ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಪರೀಕ್ಷೆ ನಡೆಯುವ ದಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ e಼ೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಬೇಕಿದೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆ ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.

ಕೆಲವು ಪ್ರಕರಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸ್ಆಪ್ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷೆಯ ಮುಖ್ಯ ಅಧೀಕ್ಷಕರು ಕ್ಯಾಮರಾ ಇಲ್ಲದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬAದಲ್ಲಿ ದಂಡ ಪ್ರಕ್ರಿಯಾ ಸಂಹಿತೆ 1973 ಸೆಕ್ಷನ್ 107 ಮತ್ತು 110ರ ಅಡಿ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.