ತುಮಕೂರು: ತೋಟಗಾರಿಕೆ ಇಲಾಖೆ ರಾಜ್ಯದ ವಿವಿಧ ಭಾಗಗಳಲ್ಲಿನ 10 ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗಾಗಿ ಜು.1 ರಿಂದ 2025ರ ಮಾ.31ರ ವರೆಗೆ 9 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ತೋಟಗಾರಿಕೆ ಉಪ ನಿರ್ದೇಶಕ ಶಾರದಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಿಗಧಿಯಾಗಿದ್ದ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಪರಿಷ್ಕರಿಸಿ ಜುಲೈ 1 ರಿಂದ 2025ರ ಮಾರ್ಚ್ 31ರವರೆಗೆ ಹಮ್ಮಿಕೊಳ್ಳಲಾಗಿದೆ.
ತರಬೇತಿ ಆಯ್ಕೆಗಾಗಿ ಜೂನ್ 25ರಂದು ಸಂದರ್ಶನ ನಡೆಯಲಿದ್ದು, ಹೆಚ್ಚಿನ ಮಾಹಿತಿಗಾಗಿ ತುಮಕೂರು ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ದೂ.0816 2278647 ಸಂಪರ್ಕಿಸಿ.