ಜಿಲ್ಲೆ

ಅರ್ಜಿ ಆಹ್ವಾನ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ರುಡ್​ಸೆಟ್​ ಸಂಸ್ಥೆ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್​ ಮತ್ತು ಫ್ಯಾಬ್ರಿಕ್​ ಪೇಂಟಿಂಗ್​ ಕುರಿತ 30 ದಿನಗಳ ಉಚಿತ ತರಬೇತಿ ನೀಡಲು ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಮೇ.5ರಿಂದ ಪ್ರಾರಂಭವಾಗಲಿದ್ದು, ತರಬೇತಿ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಆಸಕ್ತರು ಏ.25ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಅರ್ಜಿ ಹಾಗೂ ಮಾಹಿತಿಗಾಗಿ ರುಡ್​ಸೆಟ್​ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್​.9380220884, 9380162042, 9113880324 ಸಂಪರ್ಕಿಸಿ.