ತುಮಕೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಒಂದೇ ಸೂರಿನಡಿ ಸೇವೆ ಒದಗಿಸಿರುವ ಒನ್ ಸ್ಟಾಪ್ ಸೆಂಟರ್-ಸಖಿ ಯೋಜನೆ ಘಟಕಕ್ಕೆ ಸಮಾಲೋಚಕ ಹಾಗೂ ವಕೀಲ(ಪ್ಯಾರಾ ಲೀಗಲ್ ಹುದ್ದೆ)ರ ಹುದ್ದೆಗೆ ತಾತ್ಕಾಲಿಕವಾಗಿ ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ನಿಗಧಿತ ನಮೂನೆಯಲ್ಲಿ ಮಾಹಿತಿ ಭರ್ತಿ ಮಾಡಿ ಫೆ.1ರೊಳಗೆ ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು. ಇವರಿಗೆ ಖುದ್ದಾಗಿ ಸಲ್ಲಿಸಬೇಕು.
ಮಾಹಿತಿಗೆ ದೂ.0816 2956624 ಸಂಪರ್ಕಿಸಿ.