ಜಿಲ್ಲೆ

ಆಸ್ತಿ ತೆರಿಗೆ ಪಾವತಿಗೆ ಸೆ.14 ಕೊನೆಯ ದಿನ

ತುಮಕೂರು: ಸರ್ಕಾರ ನಗರ ಸ್ಥಳಿಯ ಸಂಸ್ಥೆ ವ್ಯಾಪ್ತಿಯಲ್ಲಿನ ಆಸ್ತಿ ತೆರಿಗೆ ಪಾವತಿಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಹಾಗೂ ಸ್ವಯಂ ತೆರಿಗೆಯ ಪಾವತಿ ಉತ್ತೇಜಿಸುವ ನಿಟ್ಟಿನಲ್ಲಿ ಆರ್ಥಿಕ ವರ್ಷದ ಪ್ರಾರಂಭವಾದ 30 ದಿನಗಳೊಳಗೆ ಪೂರ್ಣ ಪ್ರಮಾಣದ ಆಸ್ತಿ ತೆರಿಗೆ ಪಾವತಿ ಮಾಡಿದ್ದಲ್ಲಿ ಶೇಕಡ 5ರಷ್ಟು ರಿಯಾಯಿತಿ ನೀಡಲಾಗಿದೆ.


ಈ ಅವಧಿಯನ್ನು ಸೆಪ್ಟೆಂಬರ್​ 14ರವರೆಗೆ ವಿಸ್ತರಿಸಲಾಗಿದೆ. ಆಸ್ತಿ ಮಾಲೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.