ತುಮಕೂರು: ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಸೌತೇಕಾಯಿ ಕೊಟ್ಟು `ನಿಮ್ಮ ಅಜ್ಜಿ ಕೊಟ್ಟ ಭೂಮಿಯಲ್ಲಿ ಬೆಳೆದಿದ್ದು' ಎಂದು ಆಶಿರ್ವದಿಸಿ ಗಮನ ಸೆಳೆದಿದ್ದ ಶಾರದಮ್ಮ(7) ನಿಧನರಾದರು.
ಚಿಕ್ಕನಾಯಕನಹಳ್ಳಿ ಸಮೀಪದ ಜೋಗಿಹಳ್ಳಿಯ ಶಾರದಮ್ಮ ವಯೋಸಹಜ ಅನಾರೋಗ್ಯದಿಂದ ಕೆಲವು ದಿನಗಳಿಂದ ಬಳಲುತ್ತಿದ್ದರು.
ಚಿಕ್ಕನಾಯಕನಹಳ್ಳಿ ಬಸ್ ನಿಲ್ದಾಣದಲ್ಲಿ ಸೌತೆಕಾಯಿ ಮಾರಾಟ ಮಾಡುತ್ತಿದ್ದ ಶಾರದಮ್ಮ ಅವರನ್ನು ರಾಹುಲ್‌ಗಾಂಧಿ ಗುರುತಿಸಿ ಜತೆಯಲ್ಲಿ ಪೋಟೋ ಕ್ಲಿಕ್ಕಿಸಿಕೊಂಡಿದ್ದರು.