ತುಮಕೂರು: ನಾನು ಬಿಜೆಪಿಯಲ್ಲಿಯೇ ಇದ್ದೇನೆ, ಅಲ್ಲಿಂದಲೇ ಸ್ಫರ್ಧೆಗೆ ಅವಕಾಶ ಕೂಡ ಕೇಳಿದ್ದೇನೆ, ಪಕ್ಷಾಂತರದ ಊಹಾಪೋಹಗಳಿಗೆ ಉತ್ತರಿಸಲು ಹೋಗುವುದಿಲ್ಲ ಅಂತಿಮವಾಗಿ ಜಿಲ್ಲೆಗೆ ಅನುಕೂಲವಾಗುವಂತಹ ತೀರ್ಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಪ್ರತಿಕ್ರಿಯೆ ನೀಡಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಜನರ ಭಾವನೆ ಅರ್ಥ ಮಾಡಿಕೊಂಡು ರಾಜಕೀಯ ಪಕ್ಷಗಳು ನಡೆದುಕೊಳ್ಳುವ ವಿಶ್ವಾಸವಿದೆ ಎಂದರು.
ತುಮಕೂರು ಕ್ಷೇತ್ರದಲ್ಲಿ ನಿರಂತರ ಒಡನಾಟ ಇಟ್ಟುಕೊಂಡು ಓಡಾಡುತ್ತಿದ್ದೇನೆ, ಜಾತಿ, ಪಕ್ಷ ಮೀರಿ ನನ್ನ ಪರವಾಗಿ ಜನರು ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ, ನಾನು ಸಾರ್ವಜನಿಕ ಜೀವನದಲ್ಲಿ ಇನ್ನೂ ಮುಂದುವರಿಯಬೇಕು ಎಂಬ ಅಭಿಲಾಷೆ ಇಟ್ಟುಕೊಂಡು ವರಿಷ್ಠರಿಗೆ ಟಿಕೆಟ್‌ಗೆ ಮನವಿ ಮಾಡಿದ್ದೇನೆ ಎಂದರು.
ಜಿಲ್ಲೆಯ ಜನರ ಮನಸ್ಸಿನ ಅಭಿಪ್ರಾಯವನ್ನು ವರಿಷ್ಠರಿಗೆ ತಿಳಿಸಿದ್ದೇನೆ, ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಯಕೆಯಿದೆ, ಇದು ನನ್ನ ಆಸೆಯಲ್ಲ, ಜನರ ಭಾವನೆ. ರಾಜಕೀಯ ಪಕ್ಷಗಳು ಜನರ ಭಾವನೆಯಂತೆ ತೀರ್ಮಾನ ತೆಗೆದುಕೊಳ್ಳುವ ವಿಶ್ವಾಸವಿದೆ ಎಂದು ಮಾರ್ಮಿಕವಾಗಿ ಹೇಳಿದರು.
ಬಿಜೆಪಿ ವರಿಷ್ಠರ ಭೇಟಿಗೆ ಕಾಲವಕಾಶ ಕೇಳಿದ್ದು ಶೀಘ್ರದಲ್ಲಿಯೇ ಭೇಟಿಯಾಗಿ ಜಿಲ್ಲೆಯ ರಾಜಕೀಯ ಸ್ಥಿತಿಗತಿಗಳ ಬಗ್ಗೆ ವಿವರಿಸುತ್ತೇನೆ, ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧೆಗೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.
==
ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ನಿರಂತರ ಒಡನಾಟ ಇಟ್ಟುಕೊಂಡಿದ್ದು, ಜಾತಿ, ಪಕ್ಷ ಮೀರಿ ನನ್ನ ಪರವಾಗಿ ಜನರು ಸ್ಪರ್ಧೆಗೆ ಒತ್ತಾಯಿಸುತ್ತಿದ್ದಾರೆ, ನಾನು ಸಾರ್ವಜನಿಕ ಜೀವನದಲ್ಲಿ ಇನ್ನೂ ಮುಂದುವರಿಯಬೇಕು ಎಂಬ ಅಭಿಲಾಷೆ ಇಟ್ಟುಕೊಂಡು ವರಿಷ್ಠರಿಗೂ ಮನವಿ ಮಾಡಿದ್ದೇನೆ. ಜನರ ಮನಸ್ಸಿನ ಅಭಿಪ್ರಾಯವನ್ನು ಅವರಿಗೆ ತಿಳಿಸಿದ್ದೇನೆ, ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಬಯಕೆಯಿದೆ, ಇದು ನನ್ನ ಆಸೆಯಲ್ಲ, ಜನರ ಭಾವನೆ.
ಎಸ್.ಪಿ.ಮುದ್ದಹನುಮೇಗೌಡ
ಮಾಜಿ ಸಂಸದ