ಜಿಲ್ಲೆ

ಶೌಚಾಲಯ ನಿಮಾರ್ಣಕ್ಕೆ ಸಹಾಯಧನ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 35 ವಾರ್ಡ್​ಗಳನ್ನು ಬಯಲು ಶೌಚ ಮುಕ್ತ ನಗರವನ್ನಾಗಿಸುವ ನಿಟ್ಟಿನಲ್ಲಿ 35 ವಾರ್ಡ್​ಗಳ ವ್ಯಾಪ್ತಿಯಲ್ಲಿ ಸ್ವಂತ ಮನೆ ಹೊಂದಿರುವ ಹಾಗೂ ಶೌಚಾಲಯ ನಿರ್ಮಿಸಿಕೊಳ್ಳಲು ಸ್ವಂತ ಜಾಗವಿರುವ ಸಾರ್ವಜನಿಕರಿಗೆ ಪಾಲಿಕೆ ವತಿಯಿಂದ ಸಹಾಯಧನ ನೀಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಪಾಲಿಕೆಯಿಂದ ಸ್ಥಳ ಪರಿಶೀಲನೆ ನಡೆಸಿ ಅರ್ಹ ಫಲಾನುಭವಿಗಳಿಗೆ ಸಹಾಯಧನ ಸೌಲಭ್ಯ ಕಲ್ಪಿಸಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ತುಮಕೂರು ಮಹಾನಗರಪಾಲಿಕೆಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ.