ತುಮಕೂರು: ಹೇಮಾವತಿ ಲಿಂಕ್ ಕೆನಾಲ್ ವಿರೋಧಿಸಿ ಬಿಜೆಪಿ, ಜೆಡಿಎಸ್ ಪಾದಯಾತ್ರೆ ನೇತೃತ್ವ ವಹಿಸಿ ಬಿಜೆಪಿ ಶಾಸಕ ಬಿ.ಸುರೇಶ್ಗೌಡ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸುವ ಮೂಲಕ ಹೋರಾಟವನ್ನು ರಾಜಕೀಯಗೊಳಿಸಿದರು.
ಪರಮೇಶ್ವರ್ ಸಿಎಂ ಅಗಬೇಕು ಎಂದು ಆಸೆ ಇಟ್ಟುಕೊಂಡು ಕಾಂಗ್ರೆಸ್ ಮುಖಂಡರ ವಿರುದ್ಧ ಮಾತನಾಡುವ ಧೈರ್ಯ ಮಾಡುತ್ತಿಲ್ಲ. ಹಣೆಯ ಬರಹದಲ್ಲಿ ಬರೆದಿದ್ದರೆ ಸಿಎಂ ಆಗುತ್ತೀರ ಮೊದಲು ರಾಜೀನಾಮೆ ಕೊಟ್ಟು ಸರ್ಕಾರದಿಂದ ಹೊರಬಂದು ಹೋರಾಟದಲ್ಲಿ ಭಾಗವಹಿಸಿ, ಜನರು ನಿಮ್ಮನ್ನು ಒಪು$್ಪತ್ತಾರೆ ಎಂದು ಸಲಹೆ ನೀಡಿದರು.
ಜಿಲ್ಲೆಯ ಜನರ ಹಿತಕ್ಕಾಗಿ ನಾವು ನಡೆಸುತ್ತಿರುವ ಹೋರಾಟದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ದುರಹಂಕಾರದಿಂದ ಮಾತನಾಡಿದ್ದಾರೆ, ನಾವು ಕೂಡ ಅವರಿಗೆ ಅಂತದ್ದೇ ಭಾಷೆಯಲ್ಲಿ ಪ್ರತ್ಯುತ್ತರ ನೀಡಬಹುದು, ಕಳ್ಳತನ ಮಾಡಿ, ಅಕ್ರಮವೆಸಗಿ ತಿಹಾರ್ ಜೈಲಿಗೆ ಹೋಗಿದ್ದರು ಎಂದು ಹೇಳೊಕೆ ಆಗುತ್ತಾ ಎಂದು ಮೊದಲಿಸಿದರು.
ಜಿಲ್ಲೆಯ ಬಿಜೆಪಿ, ಜೆಡಿಎಸ್ ಪಕ್ಷದ ನಾಲ್ಕು ಶಾಸಕರ ವಿರುದ್ಧ ಶಿವಕುಮಾರ್ ಮಾಡಿರುವ ಆರೋಪ ಸಾಬೀತುಪಡಿಸಿದರೆ ನಾವೆಲ್ಲರೂ ರಾಜಕೀಯ ನಿವೃತ್ತಿ ಪಡೆಯುತ್ತೇವೆ, ಕುಣಿಗಲ್ಗೆ ನೀರು ತೆಗೆದುಕೊಂಡು ಹೋಗಲು ನಮ್ಮ ಅಭ್ಯಂತರವಿಲ್ಲ, ರಾಮನಗರಕ್ಕೆ ತೆಗೆದುಕೊಂಡು ಹೋಗಲು ನಾವು ಬಿಡುವುದಿಲ್ಲ ಎಂದು ಹರಿಹಾಯ್ದರು.