ಜಿಲ್ಲೆ

ಬೆಳೆ ಸಮೀಕ್ಷೆ ಮಾಡಿ

ತುಮಕೂರು: ಜಿಲ್ಲೆಯ ರೈತರು 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆದ ತಮ್ಮ ಜಮೀನಿನ ಬೆಳೆ ವಿವರಗಳನ್ನು ಮುಂಗಾರು ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ನಲ್ಲಿ ದಾಖಲಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಡಾ.ರಮೇಶ್ ಮನವಿ ಮಾಡಿದ್ದಾರೆ.

ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಾಗುವ ಮಾಹಿತಿಯನ್ನು ಬೆಳೆ ಸಾಲ, ಬೆಳೆ ವಿಮೆ, ಬೆಂಬಲ ಬೆಲೆ ಖರೀದಿ, ಬೆಳೆ ಪರಿಹಾರ ಮತ್ತು ವಿವಿಧ ಇಲಾಖೆಗಳ ಸವಲತ್ತುಗಳನ್ನು ಪಡೆಯಲು ಹಾಗು ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಉಪಯೋಗಿಸಲಾಗುವುದು. ಈ ನಿಟ್ಟಿನಲ್ಲಿ ಸ್ವತಃ ರೈತರೇ ತಮ್ಮ ಮೊಬೈಲ್ ಆಪ್ ಮೂಲಕ ಸಕಾಲಿಕವಾಗಿ ಬೆಳೆ ವಿವರಗಳನ್ನು ತಂತ್ರಾAಶದಲ್ಲಿ ಅಪ್‌ಲೋಡ್ ಮಾಡುವುದರಿಂದ ನ್ಯೂನ್ಯತೆಗಳನ್ನು ಕಡಿಮೆ ಮಾಡಬಹುದು ಹಾಗೂ ಸೌಲಭ್ಯಗಳಿಂದ ವಂಚಿತರಾಗುವುದನ್ನು ತಪ್ಪಿಸಬಹುದು.

ಜಿಲ್ಲೆಯ ಎಲ್ಲಾ ರೈತರು ಈ ಯೋಜನೆಯ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ನಿಗಧಿತ ಸಮಯದೊಳಗೆ ಅಪ್‌ಲೋಡ್ ಮಾಡಬೇಕು.


ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ:18004253553 ಸಂಪರ್ಕಿಸಿ.