ಜಿಲ್ಲೆ

ಸಿದ್ಧಗಂಗಾ ಸ್ವಾಮೀಜಿ 61ನೇ ಜನ್ಮವರ್ಧಂತಿ; ಶ್ರೀಮಠದಲ್ಲಿ ಹಬ್ಬದ ವಾತಾವರಣ

ತುಮಕೂರು: ಸಿದ್ಧಗಂಗಾ ಮಠಾಧ್ಯಕ್ಷ ಶ್ರೀಸಿದ್ಧಲಿಂಗಸ್ವಾಮೀಜಿ ಅವರ 61ನೇ ಜನ್ಮವರ್ಧಂತಿ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಶನಿವಾರ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು, ಮುಂಜಾನೆಯಿಂದಲೂ ವಿಶೇಷ ಪೂಜಾ ಕೈಂಕರ್ಯ ನಡೆದವು.

ಲಿಂಗೈಕ್ಯ ಡಾ.ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಮಠದ ಕಿರಿಯ ಶ್ರೀಗಳಾದ ಶ್ರೀಶಿವಸಿದ್ದೇಶ್ವರ ಸ್ವಾಮೀಜಿ, ಶ್ರೀಸಿದ್ದಲಿಂಗ ಸ್ವಾಮೀಜಿಯವರ ಪಾದಪೂಜೆ ನೆರವೇರಿಸಿ ಭಕ್ತಿ ಸಮರ್ಪಿಸಿದರು. ಎಂದಿನಂತೆ ಶ್ರೀಗಳು ಮುಂಜಾನೆಯೇ ಇಷ್ಟಲಿಂಗ ಪೂಜೆ ನೆರವೇರಿಸಿದರು.

ಶ್ರೀಗಳ ಜನ್ಮವರ್ಧಂತಿ ಹಿನ್ನೆಲೆಯಲ್ಲಿ ವಿವಿಧ ಮಠಾಧೀಶರು ಶ್ರೀಗಳ ಪಾದಪೂಜೆ ನೆರವೇರಿಸಿ ಪುಷ್ಪವೃಷ್ಠಿ ಸುರಿಸಿ ಆಶೀರ್ವಾದ ಪಡೆದು ಭಕ್ತಿ ಸಮರ್ಪಿಸಿದರು.

ಸಂಸದರಾದ ಜಿ.ಎಸ್.ಬಸವರಾಜು, ಅಣ್ಣಾ ಸಾಹೇಬ್ ಜೊಲ್ಲೆ ಮತ್ತಿತರರ ರಾಜಕೀಯ ಮುಖಂಡರು ಮಠಕ್ಕೆ ಭೇಟಿ ನೀಡಿ ಆಶಿರ್ವಾದ ಪಡೆದರು.

ಬೆಳಗ್ಗೆಯಿಂದಲೇ ಮಠಕ್ಕೆ ಭಕ್ತಾದಿಗಳು ಆಗಮಿಸುತ್ತಿದ್ದರು, ಡಾ.ಶಿವಕುಮಾರಸ್ವಾಮೀಜಿ ಗದ್ದುಗೆ ದರ್ಶನ ಪಡೆದು, ನಂತರ ಮಠಾಧ್ಯಕ್ಷ ಶ್ರೀಸಿದ್ದಲಿಂಗ ಸ್ವಾಮೀಜಿ ಆಶೀರ್ವಾದ ಪಡೆದರು.