ತುಮಕೂರು: ಪರಿಶಿಷ್ಟ ಜಾತಿ, ಪಂಗಡದ ಹಾಗೂ ಅಲ್ಪಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ಉಚಿತ ವಸತಿಯುತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುವ ಸಂಬAಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2022-23ನೇ ಸಾಲಿಗೆ ಭಾರತೀಯ ಸೇನೆ, ಭದ್ರತಾ ಪಡೆ, ಅಗ್ನಿ ವೀರ್, ಪೊಲೀಸ್ ಪಡೆ ಮೊದಲಾದ ಸಮವಸ್ತç ಸೇವೆಗಳಿಗೆ ತರಬೇತಿ ನೀಡಲಿದೆ.
ಇಲಾಖೆಯ ವೆಬ್‌ಸೈಟ್ osw.kar.nic.in ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಫೆ.15ರೊಳಗೆ ಸಲ್ಲಿಸಬಹುದು.
ಮಾಹಿತಿಗೆ ಜಂಟಿ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ, ತುಮಕೂರು ಇವರನ್ನು ಸಂಪರ್ಕಿಸಿ.