ಜಿಲ್ಲೆ

ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನಕ್ಕೆ 29ರಂದು ಪರೀಕ್ಷೆ

ತುಮಕೂರು: ಕೇಂದ್ರ ಪುರಸ್ಕೃತ ಟಾಪ್ ಕ್ಲಾಸ್ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ನ್ಯಾಷನಲ್ ಸ್ಕಾಲರ್‌ಶಿಪ್ ಪೋರ್ಟಲ್ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಕೇಂದ್ರ ಪುರಸ್ಕೃತ ಟಾಪ್ ಕ್ಲಾಸ್ ವಿದ್ಯಾರ್ಥಿವೇತನವನ್ನು ಪಡೆಯಲು ರಾಜ್ಯದ ಅತ್ಯುನ್ನತ್ತ ಶಾಲೆಯ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮುಖಾಂತರ 29 ಸೆಪ್ಟೆಂಬರ್ 2023ರಂದು ಪರೀಕ್ಷೆ ನಡೆಸಲಾಗುತ್ತದೆ.

ಅರ್ಹವಿರುವ ವಿದ್ಯಾರ್ಥಿಗಳು ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಆಧಾರ್ ಕಾರ್ಡ್, ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆ ಸಂಖ್ಯೆ, ಆದಾರ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣ ಪತ್ರ ಹೊಂದಿರಬೇಕು.

ಆಸಕ್ತ ವಿದ್ಯಾರ್ಥಿಗಳು ಆಗಸ್ಟ್ 10ರೊಳಗೆ ಜಾಲತಾಣ https://yet.nta.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ನಲ್ಲಿ ಅರ್ಜಿ ಸಲ್ಲಿಸಬಹುದು.