ತುಮಕೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿ ನೀಡಲು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳು ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು, ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೆರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿ ನೀಡಲಾಗುತ್ತಿದೆ.
ಅರ್ಜಿ ನಮೂನೆಯನ್ನು ಉಪನಿರ್ದೇಶಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು.ಇವರಿಗೆ ೆ.6ರೊಳಗಾಗಿ ನೇರವಾಗಿ ಸಲ್ಲಿಸಬಹುದು.
ಮಾಹಿತಿಗೆ ದೂ.0816- 2956624 ಸಂಪರ್ಕಿಸಿ.