ಜಿಲ್ಲೆ

ವಿದ್ಯಾರ್ಥಿಗಳು ಅಂಕಗಳಿಕೆ ಜತೆಗೆ ಕೌಶಲವನ್ನು ಬೆಳಸಿಕೊಳ್ಳಬೇಕು

ತುಮಕೂರು: ವಿದೇಶಗಳಲ್ಲಿ ಓದಲು ಬಯಸುವ ವಿದ್ಯಾರ್ಥಿಗಳಿಗೆ ಕೇವಲ ಅಂಕಗಳಷ್ಟೇ ಇದ್ದರೆ ಸಾಲದು, ಕೌಶಲ ಕೂಡ ಅಗತ್ಯವಿದೆ ಎಂದು ವಿದ್ಯಾವಾಹಿನಿ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಎನ್.ಬಿ.ಪ್ರದೀಪ್‌ಕುಮಾರ್ ಹೇಳಿದರು.

ನಗರದ ವಿದ್ಯಾನಿಧಿ ಪಿಯು ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ವಿ-ಯುಫೋರಿಯಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಾಂಸ್ಕೃತಿಕವಾಗಿ, ಸಾಮಾಜಿಕವಾಗಿ ನಾವು ತೋರುವ ಬದ್ಧತೆ ನಮ್ಮ ವ್ಯಕ್ತಿತ್ವಕ್ಕೆ ಮೆರುಗು ನೀಡುತ್ತವೆ ಎಂದರು.

ವಿದ್ಯಾರ್ಥಿಗಳು ಎಲ್ಲಾ ಕ್ಷೇತ್ರಗಳಲ್ಲಿಯೂ ತೊಡಗಿಸಿಕೊಂಡು ಗುರುತಿಸಿಕೊಳ್ಳುವ ಮೂಲಕ ಎಲ್ಲರಿಗೂ ಒಳ್ಳೆಯ ಹೆಸರು ತಂದುಕೊಡುತ್ತಿದ್ದಾರೆ. ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡುತ್ತಿದ್ದಾರೆ. ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿದ್ದರೆ ಮಾತ್ರ ಕಲಿಕೆ ಸಂಪೂರ್ಣವಾಗಿ ಸರ್ವತೋಮುಖ ಪ್ರಗತಿ ಸಾಧ್ಯವಾಗುತ್ತದೆ ಎಂದರು.

ಸೃಷ್ಟಿ, ಹಿಬಾ ಫಾತಿಮಾ, ತೇಜಸ್ವಿನಿ, ಹರ್ಷಿತಾ ಮತ್ತಿತರರು ಇದ್ದರು.