ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಪಿಯು ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15ರ ವರೆಗೆ ವಿಸ್ತರಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ಜಾಲತಾಣ https://ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.